Spread the love

ಬೆಂಗಳೂರು : ಜನರ ರೊಕ್ಕಾ ಜನರಿಗೆ ನೀಡುವ ಯೋಜನೆಯನ್ನು ಕಾಂಗ್ರೆಸ ಸರ್ಕಾರ ರೂಪಿಸಿದಲ್ಲದೆ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ.ಆದರೆ ಬಿಜೆಪಿಯವರಿಗೆ ಯಾಕೆ ಹೊಟ್ಟೆ ಕಿಚ್ಚು ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದರು.

ಸಾರಿಗೆ ಇಲಾಖೆಯಿಂದ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ ʻಶತಕೋಟಿ ಸಂಭ್ರಮʼ ಕಾರ್ಯಕ್ರಮವನ್ನು ಉದ್ಘಾಟಿಸಿ,ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರಧಾನ ಮಾಡಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆ ಜಾರಿ ಆಗುವುದಿಲ್ಲ ಜಾರಿ ಆದರೆ ರಾಜ್ಯ ಆರ್ಥಿಕವಾಗಿ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಹೇಳಿದರು.

ಈಗ ಶಕ್ತಿ ಯೋಜನೆಯಲ್ಲಿ ಉಚಿತವಾಗಿ 100 ಕೋಟಿ ಬಾರಿ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ ಇನ್ನಾದರೂ ಬಿಜೆಪಿ ನಾಯಕರು ಸುಳ್ಳು ಹೇಳುವುದನ್ನು ಬಿಜೆಪಿಯವರು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ,ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಮಾಜಿ ಶಾಸಕಿ ಸೌಮ್ಯ ರೆಡ್ಡಿ,ಸಾರಿಗೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.