Spread the love

ಧಾರವಾಡ:
ಆರ್ ಟಿ ಆಯ್ ಕಾಯ೯ಕತ೯ನ
ಕಿರುಕುಳಕ್ಕೆ ಬೇಸತ್ತು ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮ ಪಂಚಾಯಿತಿ ಪಿಡಿಓ ನಾಗರಾಜ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸ್ನೇಹಿತರಿಗೆ ವೀಡಿಯೋ ಕಳಸಿ ಯರಿಕೊಪ್ಪ ಗ್ರಾಮ ಪಂಚಾಯಿತಿ ಪಿಡಿಓ ಐ ಎಂ ಸ್ವಾರಿ ಸಂದೇಶ ಕಳುಹಿಸಿ ಔಷಧಿ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆರ್.ಟಿ.ಐ ಕಾರ್ಯಕರ್ತ ಮಲ್ಲಿಕಾರ್ಜುನ ರೊಟ್ಟಿಗವಾಡ ಎಂಬ ವ್ಯಕ್ತಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ನಾನು ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವೀಡಿಯೋದಲ್ಲಿ ತಿಳಿಸಿದ್ದು, ವೀಡಿಯೋ ನೋಡಿದ ಸ್ನೇಹಿತರು ಅವರನ್ನು ಹುಡುಕಾಟ ನಡೆಸಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.