Spread the love

ಧಾರವಾಡ:ತಾಲೂಕಿನ ಮನಸೂರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಗ್ರಾಪಂ ಅಧ್ಯಕ್ಷೆ ತಿಪ್ಪವ್ವಾ ಹಲಗಿ ಚಾಲನೆ ನೀಡಿದರು.
ಧಾರವಾಡ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯಗದಲ್ಲಿ ಗ್ರಾಮದ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಗ್ರಾಮ ಪಂಚಾಯತ್‍ಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ಯಶಸ್ಸಿಗೊಳಿಸಲಾಗಿದ್ದು, ಮನಸೂರ,‌ ಮನಗುಂಡಿ, ಹಳ್ಳಿಗೇರಿ, ನಿಗದಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚರಿಸಿತು
ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕಿ ಸಮಾಜ ಕಲ್ಯಾಣ ಇಲಾಖೆ ಎಂ.ಬಿ.ಸಣ್ಣೇರ ಉಪಸ್ಥಿತಿಯಲ್ಲಿ ಹಲವಾರು ಕಲಾ ತಂಡಗಳು, ಶಾಲೆಯ ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಎಲ್ಲಾ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು, ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಭಾತಪೇರಿ ಮೂಲಕ ಮೆರವಣಿಗೆ ಗ್ರಾಮದ ಎಲ್ಲಾ ಬೀದಿ ಬೀದಿಗಳಲ್ಲಿ ಸಂಚರಿಸಿತು.
ವೇದಿಕೆ ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ವಾಚಿಸುವಿಕೆ, ಸಂವಿಧಾನದ ಮಹತ್ವದ ಕುರಿತು ಉಪನ್ಯಾಸಕರಿಂದ ಉಪನ್ಯಾಸ, ಬೀದಿ ನಾಟಕಗಳ ಮೂಲಕ ಸಾಮಾಜಿಕ ಅರಿವು ಮೂಡಿಸುವ ಹಾಗೂ ಶಾಲಾ ವಿದ್ಯಾರ್ಥಿಗಳ ಹಲವಾರು ಸಂವಿಧಾನದ ಬಗ್ಗೆ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ಏರ್ಪಡಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ದ್ವಿಚಕ್ರ ವಾಹನ ರ್ಯಾಲಿ ಏರ್ಪಡಿಸಲಾಗಿತ್ತು.

ಧಾರವಾಡ ತಾಲೂಕಿನ ಮನಸೂರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಗ್ರಾಪಂ ಅಧ್ಯಕ್ಷೆ ತಿಪ್ಪವ್ವಾ ಹಲಗಿ ಚಾಲನೆ ನೀಡಿದರು.