Spread the love

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಶ್ರೀ ಬಸವೇಶ್ವರ ಪೀಠ ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯ ಇವುಗಳ ಸಹಯೋಗದಲ್ಲಿ ಫೆಬ್ರುವರಿ 12 ರಂದು ಕೃಷಿ ವಿಶ್ವವಿದ್ಯಾಲಯದ ಸಮುದಾಯ ಮಹಾವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಬೆಳಿಗ್ಗೆ 10:30ಕ್ಕೆ, ‘ವಚನಗಳಲ್ಲಿ ವ್ಯಕ್ತಿತ್ವ ವಿಕಾಸ’, ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಕೆ.ಬಿ.ಗುಡಸಿ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಬಸವ ಸಮಿತಿ ಅಧ್ಯಕ್ಷರಾದ ಡಾ. ಅರವಿಂದ ಜತ್ತಿ ವಿಶೇಷ ಉಪನ್ಯಾಸ ನೀಡಿಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯದ ಕುಲಸಚಿವೆ ವಿಜಯಲಕ್ಷ್ಮಿ. ಆರ್, ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಎ. ಚೆನ್ನಪ್ಪ, ಕೃಷಿ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿಗಳಾದ ಹೆಚ್.ಬಿ.ಬಬಲಾದ ಅವರು ಭಾಗವಹಿಸಲಿದ್ದಾರೆ ಎಂದು ಕವಿವಿ ಶ್ರೀ ಬಸವೇಶ್ವರ ಪೀಠದ ಸಂಯೋಜಕ ಡಾ.ಸಿ.ಎಂ.ಕುಂದಗೋಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.